ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಬೋಗಸ್ ವ್ಯಕ್ತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಕಿಡಿಕಾರಿದ್ದು, ಲಕ್ಷ್ಮೀ ಹೆಬ್ಬಾಳಕರ ಬೆಳೆದು ಬಂದಿರುವುದು ಯಾವ ರೀತಿ ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ ಎಂದು ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.ಲಾಟರಿ ಮಂತ್ರಿ, ಲಾಟರಿ ಎಂಎಲ್ಸಿ ಸಧ್ಯದಲ್ಲೆ ಅವರು ಮಾಜಿ ಆಗುತ್ತಾರೆ. ಇನ್ನು ಪೃಥ್ವಿ ಸಿಂಗ್ ಬೆನ್ನಿಗೆ ನೂರಕ್ಕೆ ನೂರು ನಾನು ನಿಲ್ಲುತ್ತೇನೆ. ಒಂದು ವೇಳೆ ಪೃಥ್ವಿ ಸಿಂಗ್ ವೇನಾದರೂ ತಪ್ಪು ಮಾಡಿದ್ದರೆ ನಾನು ಅವನ ವಿರುದ್ಧ ಎಂದರು. ಲ್ಯಾಂಡ್ ಮಾಫಿಯಾ ಜೋರಾಗಿದೆ ಎಂಬ ವಿಚಾರಕ್ಕೆ ಪಾರಿಶ್ವಾಡದಲ್ಲಿ ಮಹಿಳೆಯರೇ ಗೂಂಡಾಗಿರಿ ಮಾಡುತ್ತಿದ್ದಾರೆ. ಬೇಲಿ ಹಚ್ಚಿ ರಸ್ತೆ ಬಂದ್ ಮಾಡಿ, ಹೊಲ ಕಬ್ಜಾ ಮಾಡಿಕೊಳ್ಳುತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿಜವಾಗಿ ಯಾರಿಗಾದರೂ ಅನ್ಯಾಯವಾದರೆ ಅವರ ಪರವಾಗಿ ನಾನು ನಿಲ್ಲುತ್ತೇನೆ ಎಂದರು.
ಜಾರಕಿಹೊಳಿ ಕುಟುಂಬ ಯಾವತ್ತೂ ಚಿಲ್ಲರೆ ರಾಜಕಾರಣ ಮಾಡಿಲ್ಲ, ಪೃಥ್ವಿಸಿಂಗ್ ಪ್ರಕರಣದಲ್ಲಿ ನ್ಯಾಯ ಸಿಗುವ ನಿರೀಕ್ಷೆ ತನಗಿಲ್ಲ, ಅದನ್ನು ನ್ಯಾಯಾಲಯದಿಂದ ಪಡೆಯುವ ಪ್ರಯತ್ನ ಮಾಡುವುದರ ಜೊತೆಗೆ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ಹೇಳಿದರು. ಇನ್ನೂ ಪೃಥ್ವಿಸಿಂಗ್ ಮೇಲೆ ನಡೆದಿರುವ ಹಲ್ಲೆಗೆ ಸಂಬಂಧಿಸಿದಂತೆ, ಪೊಲೀಸರು ತನಿಖೆ ನಡೆಸಲಿ ಅವರಿಗೆ ಒಂದಷ್ಟು ಸಮಾಯಾವಕಾಶ ನೀಡುವ ಅವಶ್ಯಕತೆಯಿದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





