Breaking News

ಹುಬ್ಬಳ್ಳಿಯಲ್ಲಿ ಅಂಗಡಿಗಳಿಗೆ ಕನ್ನಾ ಹಾಕುತ್ತಿದ್ದ ಅಂತರ್‌ರಾಜ್ಯ ಕಳ್ಳನ ಬಂಧಿಸುವಲ್ಲಿ ಯಶಸ್ವಿ…

ಹುಬ್ಬಳ್ಳಿ: ವಾಣಿಜ್ಯ ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿದ್ದು, ಅಂಗಡಿಗಳಿಗೆ ಕನ್ನಾ ಹಾಕುತ್ತಿದ್ದ ಅಂತರ್‌ರಾಜ್ಯ ಕಳ್ಳನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹರಾಷ್ಟ್ರದ ಅಕ್ಕಲಕೋಟೆಯ ಮಹೇಶ್‌ ಪೂಜಾರಿ ಬಂಧಿತ ಆರೋಪಿಯಾಗಿದ್ದು, ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಮಹೇಶ್ ಪೂಜಾರಿಯನ್ನು ಅರೆಸ್ಟ್ ಮಾಡಿದ್ದಾರೆ.ಹುಬ್ಬಳ್ಳಿಯ ವಿವಿದೆಡೆ ಅಂಗಡಿಗಳ ಬೀಗ ಒಡೆದು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಯಶಸ್ವಿ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆದಿದ್ದು, ಬಂಧಿತನಿಂದ ಎರಡು ಲಕ್ಷ ನಗದು, ಕಳ್ಳತನಕ್ಕೆ ಬಳಸಿದ್ದ ವಸ್ತುಗಳು ಜಪ್ತಿ ಮಾಡಲಾಗಿದೆ. ಉಪನಗರ ಠಾಣೆ ಪೊಲೀಸ್‌ ಇನ್ಸ್‌ಪೆಕ್ಟರ್ ಎಮ್.ಎಸ್. ಹೂಗಾ‌ರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *