Breaking News

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ….

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಇದರ ಜೊತೆ ಈಗ ಮುಸ್ಲಿಂ ಸಮುದಾಯದ ಮುಖಂಡರು ಕೂಡ ಗರಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಬಿಜೆಪಿ ನಾಯಕ ಎಡವಟ್ಟು ಮಾಡಿಕೊಂಡ್ರ? ಅನ್ನೋ ಅನುಮಾನ ಕೂಡ ಚರ್ಚೆಗೆ ಗ್ರಾಸವಾಗಿದೆ. ಹಾಗಾದರೆ ಮುಸ್ಲಿಂ ಸಮುದಾಯದ ಮುಖಂಡರು, ಈಗ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರೊಚ್ಚಿಗೆದ್ದಿದ್ದು ಯಾಕೆ?

ಬಸನಗೌಡ ಪಾಟೀಲ್ ಯತ್ನಾಳ್ ಹುಚ್ಚರಂತೆ ವರ್ತನೆ ಮಾಡುತ್ತಿದ್ದಾರೆ. ಈ ವಿಷಯ ಕೇಳಿ ನನಗೆ ಆಶ್ಚರ್ಯ ಆಗಿದೆ ಅಂತ ಹುಬ್ಬಳ್ಳಿಯಲ್ಲಿ ಮಾಜಿ ಸಚಿವ & ಮುಸ್ಲಿಂ ಧರ್ಮ ಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್. ಹಿಂಡಸಗೇರಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿಯ ಶಾಸಕ ಹಾಗೂ ಉತ್ತರ ಕರ್ನಾಟಕದ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಎ.ಎಮ್. ಹಿಂಡಸಗೇರಿ ಹೀಗೆ ಪ್ರತಿಕ್ರಿಯೆ ನೀಡಿದ್ದು, ಯತ್ನಾಳ್ ಅವರಿಗೆ ಸವಾಲನ್ನೂ ಹಾಕಿದ್ದಾರೆ.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *