ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ವಾಗುವುದು ಯಾವಾಗ?. ಕರ್ನಾಟಕ ಸರ್ಕಾರ ಯೋಜನೆಯ ಡಿಪಿಆರ್‌ಗೆ ಒಪ್ಪಿಗೆ ನೀಡುವುದು ಯಾವಾಗ?. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಕರ್ಯಗಳ ಇಲಾಖೆ ಖಾತೆ ಸಚಿವ ಎಂ. ಬಿ. ಪಾಟೀಲ್ ವಿಮಾನ ನಿಲ್ದಾಣದ ಕುರಿತು ಅಪ್‌ಡೇಟ್ ಕೊಟ್ಟಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಎಂಎಲ್‍ಸಿ ವೈ. ಎಂ. ಸತೀಶ್ ಕೇಳಿದ ಪ್ರಶ್ನೆಗೆ ಸಚಿವ ಎಂ. ಬಿ. ಪಾಟೀಲ್ ಪರವಾಗಿ ಸಚಿವ ಶರಣ ಬಸಪ್ಪ ದರ್ಶನಾಪುರ ಉತ್ತರ ನೀಡಿದರು. “ಸಿರಿವಾರ-ಚಾಗನೂರು ಗ್ರಾಮದ 900.96 ಎಕರೆ ಭೂ ಪ್ರದೇಶದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಡಿಪಿಆರ್ ಸಿದ್ದಪಡಿಸುವ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲಿದ್ದು, ಶೀಘ್ರದಲ್ಲೇ ಅನುಮೋದನೆ ಸಿಗಲಿದೆ”ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ ಸರ್ಕಾರ ಸ್ವಾಧೀನ ಮಾಡಿಕೊಂಡಿರುವ 806.34 ಎಕರೆ ಭೂಮಿಯನ್ನು ಬಳ್ಳಾರಿ ತಹಶೀಲ್ದಾರ್‌ಗೆ ಹಸ್ತಾಂತರ ಮಾಡಿ, ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆಯಿಂದ ವಿಮಾನ ನಿಲ್ದಾಣದ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವ ಪ್ರಸ್ತಾವನೆಗೆ ಹಣಕಾಸು ಇಲಾಖೆಯಿಂದ ಶೀಘ್ರದಲ್ಲಿಯೇ ಅನುಮೋದನೆ ಸಿಗಲಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





