Breaking News

ಬ್ಯುಸಿಯಾಗಿರು ನಟ ಧನಂಜಯ ಈಗ ಸರ್ಕಾರದ ಉತ್ಪನ್ನಕ್ಕೆ ರಾಯಭಾರಿಯಾಗಿ ಆಯ್ಕೆ…..

ನಟನೆ, ಸಿನಿಮಾ ನಿರ್ಮಾಣ, ಸಿನಿಮಾ ಬರವಣಿಗೆ ಎಂದು ಬ್ಯುಸಿಯಾಗಿರು ನಟ ಧನಂಜಯ ಈಗ ಸರ್ಕಾರದ ಉತ್ಪನ್ನಕ್ಕೆ ರಾಯಭಾರಿಯಾಗಿ ಆಯ್ಕೆ ಆಗಿದ್ದಾರೆ. ಲಿಡ್ಕರ್ ಉತ್ಪನ್ನಗಳ ರಾಯಭಾರಿಯಾಗಿ ಧನಂಜಯ ಅವರನ್ನು ಸರ್ಕಾರ ಇತ್ತೀಚೆಗೆ ಆಯ್ಕೆ ಮಾಡಿತ್ತು. ವಿಧಾನಸೌಧ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಧನಂಜಯ್ ರಾಯಭಾರಿಯಾಗಿದ್ದು ಉತ್ಪನ್ನಗಳ ಬಗ್ಗೆ ಪ್ರಚಾರ ಮಾಡಲಿದ್ದಾರೆ. ಮೊದಲ ಬಾರಿಗೆ ಸರ್ಕಾರದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ಲಿಡ್ಕರ್ ಉತ್ಪನ್ನಕ್ಕೆ ಸರ್ಕಾರ ರಾಯಭಾರಿಯನ್ನು ನೇಮಿಸಿದೆ. ಲಿಡ್ಕಡ್ ಉದ್ಯಮವನ್ನು ನಂಬಿಕೊಂಡು ಸುಮಾರು 50 ಸಾವಿರ ಕುಟುಂಬಗಳಿವೆ.

ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನಟ ಧನಂಜಯ್ “ನಾನು ಮೊದಲ ಬಾರಿಗೆ ರಾಯಭಾರಿ ಆಗುತ್ತಿದ್ದೇನೆ. ಅದು ಕೂಡ ಈ ರೀತಿಯ ಉದ್ದೇಶಕ್ಕೆ ಲಿಡ್ಕರ್ ಉತ್ಪನ್ನಗಳಿಗೆ ರಾಯಭಾರಿಯಾಗಿರುವುದು ಖುಷಿ ಇದೆ. ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ ಅವರು ಈ ಉದ್ಯಮ ನಂಬಿಕೊಂಡು 50 ಸಾವಿರ ಕುಟುಂಬಗಳಿವೆ ಎಂದಾಗ ಖುಷಿಯಾಯಿತು. ಲಿಡ್ಕರ್ ಸಂಸ್ಥೆಗಳಿಂದ ಹಾಕಿಕೊಟ್ಟಿರುವ ಅಂಗಡಿಗಳನ್ನು ನೋಡಿದ್ದೇನೆ. ಲಿಡ್ಕರ್ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯ ಅವರ ಭಾವಚಿತ್ರ ಹಾಕಿದ್ದರು. ನಮ್ಮ ಕರ್ನಾಟಕದಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯರಂತಹ ಸಾವಿರಾರು ಜನ ಕುಶಲಕರ್ಮಿಗಳಿದ್ದಾರೆ”

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *