Breaking News

ಪೂಜಾ ಗಾಂಧಿ ಅವರಿಗೆ ಕುವೆಂಪು ಅವರ ಮೇಲಿರುವ ಅಭಿಮಾನ ತಿಳಿದುಬಂದಿದೆ….

ಬೆಂಗಳೂರು: ಕನ್ನಡ ಚಿತ್ರರಂಗದ ಮಳೆ ಹುಡುಗಿ ಪೂಜಾ ಗಾಂಧಿ ಅವರ ಕನ್ನಡ ಪ್ರೀತಿಗೆ ಮನಸೋಲದವರಿಲ್ಲ. ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಅನ್ನ ನೀಡಿದ ಭಾಷೆ ಕನ್ನಡದ ಮೇಲಿನ ಅಭಿಮಾನದಿಂದ ಓದಲು ಹಾಗೂ ಬರೆಯಲು ಕಲಿತಿದ್ದಾರೆ. ಪೂಜಾ ಗಾಂಧಿ ಅವರಿಗೆ ಕನ್ನಡ ಮಾತ್ರವಲ್ಲ, ರಾಷ್ಟ್ರಕವಿ ಕುವೆಂಪು ಅವರ ಮೇಲೂ ಅಪಾರವಾದ ಗೌರವ ಹೊಂದಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವ ಪೂಜಾ ಗಾಂಧಿ ಇತ್ತೀಚಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಪೂಜಾ ಗಾಂಧಿ ತಮ್ಮ ಮದುವೆಯ ಬಗ್ಗೆ ಅಭಿಮಾನಿಗಳೊಂದಿಗೆ ಹಂಚಿಕೊಂಡಾಗ ಎಲ್ಲರಿಗೂ ಆಶ್ಚರ್ಯ ಆಗಿದ್ದಂತೂ ಸತ್ಯ. ಯಾಕೆಂದರೆ ಜನಪ್ರಿಯ ನಟಿಯಾಗಿರುವ ಪೂಜಾ ಗಾಂಧಿ ಸರಳ ವಿವಾಹವನ್ನು ಆಯ್ಕೆ ಮಾಡಿಕೊಂಡಿದ್ದರು. ಮುಖ್ಯವಾಗಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಪ್ರಕಾರ ಹೊಸ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದರು.

ನವೆಂಬರ್ 29ರಂದು ಬೆಂಗಳೂರಿನ ಯಲಹಂಕದಲ್ಲಿ ಪೂಜಾ ಗಾಂಧಿ ಉದ್ಯಮಿ ವಿಜಯ್ ಘೋರ್ಪಡೆ ಅವರ ಜೊತೆ ಮಂತ್ರ ಮಾಂಗಲ್ಯ ಪದ್ಧತಿಯ ಪ್ರಕಾರ ವಿವಾಹವಾಗಿದ್ದರು. ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಪೂಜಾ ಗಾಂಧಿ ಅವರ ಮಂತ್ರ ಮಾಂಗಲ್ಯ ಪದ್ಧತಿ ಆಯ್ಕೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ ಪೂಜಾ ಗಾಂಧಿ ಅವರಿಗೆ ಕುವೆಂಪು ಅವರ ಮೇಲಿರುವ ಅಭಿಮಾನ ತಿಳಿದುಬಂದಿದೆ.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *