ಬುಧವಾರ ಮಿರ್‌ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ನ್ಯೂಜಿಲೆಂಡ್ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಬಾಂಗ್ಲಾದೇಶದ ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ಮುಶ್ಫಿಕರ್ ರಹೀಮ್ ವಿಲಕ್ಷಣ ಶೈಲಿಯಲ್ಲಿ ಔಟಾಗುವ ಮೂಲಕ ಸುದ್ದಿಯಾಗಿದ್ದಾರೆ. ಬಾಂಗ್ಲಾದೇಶದ ಮೊದಲ ಇನಿಂಗ್ಸ್‌ನ 41ನೇ ಓವರ್‌ನಲ್ಲಿ ಈ ಘಟನೆ ನಡೆದಿದೆ. 35 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದ ರಹೀಮ್ ಕೈಲ್ ಜೇಮಿಸನ್ ಬೌನ್ಸ್ ಮಾಡಿದ ಚೆಂಡನ್ನು ರಕ್ಷಣಾತ್ಮಕವಾಗಿ ಆಡಿದರು. ಆದರೆ, ರಹೀಮ್ ಚೆಂಡು ವಿಕೆಟ್‌ಗೆ ಬಡಿಯುತ್ತದೆ ಎಂದು ಕೈಯಲ್ಲಿ ತಳ್ಳಿದ್ದು ಪ್ರಮಾದವಾಗಿದೆ.
ಬ್ಯಾಟರ್ ಕೈನಲ್ಲಿ ಚೆಂಡನ್ನು ತಳ್ಳಿದ್ದಕ್ಕೆ ನ್ಯೂಜಿಲೆಂಡ್ ಆಟಗಾರರು ಮನವಿ ಮಾಡಿದ್ದರಿಂದ ಆನ್‌ಫೀಲ್ಡ್ ಅಂಪೈರ್‌ಗಳು ಇಬ್ಬರೂ ಚರ್ಚಿಸಿ ಮೂರನೇ ಅಂಪೈರ್ ತೀರ್ಮಾನಕ್ಕೆ ಕಳುಹಿಸಿದರು. ಮೂರನೇ ಅಂಪೈರ್ ನಂತರ ಬ್ಯಾಟರ್ ಉದ್ದೇಶಪೂರ್ವಕವಾಗಿ ಚೆಂಡನ್ನು ನಿಲ್ಲಿಸಿದ ಎಂದು ಭಾವಿಸಿ ‘ಫೀಲ್ಡ್ ಅನ್ನು ಅಡ್ಡಿಪಡಿಸಿದ’ ಎಂದು ಮುಶ್ಫಿಕರ್ ಅವರನ್ನು ಔಟ್ ಎಂದು ತೀರ್ಪು ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





