Breaking News

ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ…

ಮಂಡ್ಯ: ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಬಾಕಿ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಆಫ್ ಬರೋಡದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ನಗರದ ನೂರಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಂಕ್ ಆಫ್ ಬರೋಡಾ ಶಾಖೆಗಳಲ್ಲಿ ರೈತರು ಪಡೆದಿರುವ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಂಡಿರುವ ಕಿಸಾನ್ ಸಮ್ಮನ್, ಹಾಲಿನ ಪ್ರೋತ್ಸಾಹಧನ, ವಿಧವಾ ವೇತನ, ವೃದ್ದಾಪ್ಯವೇತನ, ಅಂಗವಿಕಲರ ವೇತನ, ನರೇಗಾ ಕೂಲಿ, ಅನ್ನಭಾಗ್ಯ, ಸಾಮಾಜಿಕ ಭದ್ರತಾ ಯೋಜನೆ ಮೊಬಲಗನ್ನು ಬ್ಯಾಂಕ್ ಅಧಿಕಾರಿಗಳು ಬಾಕಿ ಇರುವ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಈ ಹಣವನ್ನು ಫಲಾನುಭವಿಗಳ ಖಾತೆಗೆ ಮರು ಜಮಾಪಡಿಸಬೇಕು. ಫಲಾನುಭವಿಗಳ ಒಪ್ಪಿಗೆ ಇಲ್ಲದೆ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಎಚ್ಚರಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *