Breaking News

ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪ…

ಬೆಳಗಾವಿ : ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ. ಅವರಿಂದ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಮಂಗಳವಾರ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು. ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿ ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ ರಾಜಕೀಯವನ್ನೂ ಮಾಡಬೇಕಲ್ಲ. ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ, ಬಹುತೇಕ ಜನ ವಾಪಸ್ಸು ಬಂದಿದ್ದಾರೆ ಎಂದರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *