Breaking News

ರಾಜ್ಯ ಸರ್ಕಾರದ ಬಳಿ ರೈತರಿಗೆ ಕೊಡೋಕೆ ಹಣ ಇಲ್ಲ, ಆದರೆ ಅಲ್ಪಸಂಖ್ಯಾತರಿಗೆ ಮಾತ್ರ ಕೋಟಿ ಕೋಟಿ ಹಣ ಕೊಡುತ್ತೇವೆ ಅಂತಾ ಹೇಳುತ್ತಾರೆ.

ಬೆಳಗಾವಿ: ರಾಜ್ಯ ಸರ್ಕಾರದ ಬಳಿ ರೈತರಿಗೆ ಕೊಡೋಕೆ ಹಣ ಇಲ್ಲ, ಆದರೆ ಅಲ್ಪಸಂಖ್ಯಾತರಿಗೆ ಮಾತ್ರ ಕೋಟಿ ಕೋಟಿ ಹಣ ಕೊಡುತ್ತೇವೆ ಅಂತಾ ಹೇಳುತ್ತಾರೆ. ಇದೇನಾ ನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.‌ ನಗರದಲ್ಲಿ ಗುರುವಾರ ಖಾಸಗಿ ಹೊಟೆಲ್‌ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲವಿದೆ, ಆದರೆ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಒಣಮೇವು, ಹಸಿ ಮೇವಿನ ಅಭಾವ ಉಂಟಾಗಿದ್ದು, ರೈತರು ಆತಂಕದಲ್ಲಿ ಇದ್ದಾರೆ. ರಾಜ್ಯದ ಯಾವ ಭಾಗದಲ್ಲಿಯೂ ಗೋಶಾಲೆ ತೆರೆದಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಆಗಿದೆ ಎಂದ ಅವರು, ಮೌಲ್ವಿಗಳಿಗೆ ದುಡ್ಡು ಕೊಡೋಕೆ ಜೇಬಿನಲ್ಲಿ ಹತ್ತು ಸಾವಿರ ಕೋಟಿ ಇಟ್ಟುಕೊಂಡು ಅಡ್ಡಾಡುತ್ತಾರೆ. ಇದ್ಯಾವ ನ್ಯಾಯ ಎಂದು ಅವರು ಪ್ರಶ್ನೆ ‌ಮಾಡಿದರು. ಇನ್ನು ಕಾಂಗ್ರೆಸ್ ಸರ್ಕಾರ ಒಡೆದಾಳುವ ನೀತಿ ಅನುಸರಿಸುತ್ತಿದೆ. ರಾಜ್ಯದಲ್ಲಿ ದಲಿತರ ಹಣ ದುರ್ಬಳಕೆ ಆಗಬಾರದು ಎಂದು ಸರ್ಕಾರದ ವಿರುದ್ಧ ಗುಡುಗಿದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *