ಹೈದರಾಬಾದ್: ತೆಲಂಗಾಣದಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದಿಂದ ಅವಿರೋಧವಾಗಿ ಆಯ್ಕೆಯಾದ ರೇವಂತ್ ರೆಡ್ಡಿ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣ ಪ್ರತ್ಯೇಕಗೊಂಡ ಬಳಿಕ ಎರಡನೇ ಸಿಎಂ ಆದ ಹೆಗ್ಗಳಿಕೆ ರೇವಂತ್ ರೆಡ್ಡಿ ಪಾತ್ರವಾಗಿದ್ದಾರೆ.
ಇಂದು ಗುರುವಾರ ತೆಲಂಗಾಣದಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಉಪಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ ಒಟ್ಟು ಹತ್ತು ಮಂದಿ ನಾಯಕರು ರೇವಂತ್ ರೆಡ್ಡಿ ನೇತೃತ್ವದ ಸರ್ಕಾರದಲ್ಲಿ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





