ಬೆಂಗಳೂರು: ಸಾರಿಗೆ ಇಲಾಖೆಯ ಅಂಕಿಅಂಶಗಳ ಪ್ರಕಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗಳನ್ನು ಒಳಗೊಂಡ ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. 2022 ಮತ್ತು 2023 ರಲ್ಲಿ ನಡುವಿನ ಅವಧಿಯಲ್ಲಿ ಬಿಎಂಟಿಸಿ ಬಸ್ ಅಪಘಾತಗಳಿಂದ 71 ಜನರು ಮತ್ತು ಕೆಎಸ್ಆರ್‌ಟಿಸಿ ಬಸ್ ಅಪಘಾತಗಳಿಂದ 23 ಜನರು ಸಾವನ್ನಪ್ಪಿದ್ದಾರೆ. ಇಲಾಖೆ ಮಾಹಿತಿ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು 94 ಮಾರಣಾಂತಿಕ ಮತ್ತು 233 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ.
2020 ರಿಂದ 2021 ರ ನಡುವೆ, ಬಿಎಂಟಿಸಿ ಬಸ್‌ಗಳು 49 ಮಾರಣಾಂತಿಕ ಮತ್ತು 107 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ. ಅದೇ ಅವಧಿಯಲ್ಲಿ, ಕೆಎಸ್‌ಆರ್‌ಟಿಸಿ ಬಸ್‌ಗಳು 12 ಮಾರಣಾಂತಿಕ ಮತ್ತು 15 ಮಾರಣಾಂತಿಕ ಅಪಘಾತಗಳು ಸಂಭವಿಸಿವೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





