ಬೆಳಗಾವಿ: ಬಿಜೆಪಿ ಅಧ್ಯಕ್ಷನಾಗಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆ ಮಾಡುವುದು ನನ್ನ ಕರ್ತವ್ಯವಾಗಿದೆ. ಇದು ನನ್ನ ಪ್ರಥಮ ಆದ್ಯತೆ. ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ. ರಾಜ್ಯಾಧ್ಯಕ್ಷನಾಗಿಯೂ ಹೆದರುವುದಿಲ್ಲ. ಇವೆಲ್ಲವನ್ನೂ ನಾವು ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಈ ಕುರಿತು ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುಲ್ಬರ್ಗದಲ್ಲಿ ಮಣಿಕಂಠ ರಾಠೋಡ್ ವಿಚಾರದಲ್ಲಿ ಮತ್ತೊಂದೆಡೆ ಪ್ರಿಯಾಂಕ್ ಖರ್ಗೆಯವರು ಪೊಲೀಸ್ ವರದಿ ಆಧಾರದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಪೊಲೀಸರು ಹೇಳಿದ್ದೆಲ್ಲವೂ ಸತ್ಯವೆಂದು ನಂಬುವುದಿಲ್ಲ ಎಂದು ಹೇಳಿದರು.
ಅಧಿವೇಶನ ನಡೆಯುವ ಸಂದರ್ಭದಲ್ಲೇ ಬಿಜೆಪಿ ಕಾರ್ಯಕರ್ತ, ದಲಿತ ಮುಖಂಡನ ಮನೆಗೆ ಹೋಗಿ ಹೊರಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆದರೆ, ರಾಜ್ಯ ಸರಕಾರ, ಪೊಲೀಸರು 307ನೇ ವಿಧಿಯಡಿ ಕೊಲೆ ಯತ್ನದ ಪ್ರಕರಣ ದಾಖಲಿಸಿಲ್ಲ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಎಂಎಲ್‍ಸಿ ಹೆಸರನ್ನು ಎ1 ಆರೋಪಿ ಎಂದು ಉಲ್ಲೇಖಿಸಿದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





