Breaking News

ಮೆಟ್ರೋದಲ್ಲಿ ಇಬ್ಬರು ಪುರುಷರು ಸೀಟಿಗಾಗಿ ಹೊಡೆದಾಡಿಕೊಂಡ ಘಟನೆ ನವದೆಹಲಿಯಲ್ಲಿ ನಡೆದಿದೆ…

ನವದೆಹಲಿ: ಮೆಟ್ರೋಗಳಲ್ಲಿ ಕೆಲವೊಂದು ವಿಚಿತ್ರ ಘಟನೆಗಳು ನಡೆದಿರುವ ಉದಾಹರಣೆಗಳಿವೆ. ಪ್ರೇಮಿಗಳು ಕಿಸ್‌ ಮಾಡುವುದು, ರೀಲ್ಸ್‌ ಮಾಡುವುದು ಸೇರಿದಂತೆ ಇನ್ನಿತರ ಘಟನೆಗಳು ನಡೆದಿವೆ. ಅಲ್ಲದೆ ಇತ್ತೀಚೆಗಷ್ಟೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಭಿಕ್ಷೆ ಬೇಡಿದ ಹಾಗೂ ರೀಲ್ಸ್‌ ಮಾಡಿ ಪೇಚಿಗೆ ಸಿಲುಕಿದ್ದು, ನಂತರ ಅವರ ವಿರುದ್ಧ ಬಿಎಂಆರ್‌ಸಿಎಲ್‌ ಕ್ರಮ ಜರುಗಿಸಿತ್ತು. ಇದೀಗ ಮೆಟ್ರೋದಲ್ಲಿ ಇಬ್ಬರು ಪುರುಷರು ಸೀಟಿಗಾಗಿ ಹೊಡೆದಾಡಿಕೊಂಡ ಘಟನೆ ನವದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೆಟ್ರೋ ಹಲವು ವಿಚಾರಗಳಿಗೆ ದೇಶದ ಜನತೆಯ ಗಮನ ಸೆಳೆಯುತ್ತಿದ್ದು, ಇದೀಗ ಮೆಟ್ರೋದಲ್ಲಿ ಸೀಟಿಗಾಗಿ ಇಬ್ಬರು ವ್ಯಕ್ತಿಗಳ ನಡುವಿನ ಹೊಡೆದಾಟದ ವಿಡಿಯೋ ಭಾರೀ ವೈರಲ್‌ ಆಗಿದೆ. ಈ ವಿಡಿಯೋ ನೋಡಿದ ಜನರು ಕಾಮೆಂಟ್‌ಗಳ ಮೂಲಕ ಇಬ್ಬರು ವ್ಯಕ್ತಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಗಳಿಬ್ಬರ ನಡುವೆ ಕಳಿತುಕೊಳ್ಳುವ ಆಸನದ ವಿಚಾರಕ್ಕೆ ಗಲಾಟೆ ಶುರುವಾಗಿದ್ದು, ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಬಳಿಕ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಂಡಿದ್ದು, ಈ ವೇಳೆ ಕೆಲವರು ಗಲಾಟೆಯನ್ನು ಬಿಡಿಸಲು ಮುಂದಾದರೆ, ಇನ್ನು ಕೆಲವರು ಮಾನವೀಯತೆ ಮರೆತು ಇದನ್ನು ತಮಾಷೆ ನೋಡುತ್ತಾ ತಮ್ಮ ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ ಮಾಡುತ್ತಿರುವ ದೃಶ್ಯವೂ ಕೂಡ ಚರ್ಚೆಗೆ ಗ್ರಾಸವಾಗಿದೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *