Breaking News

ಸದನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್‌ ವಿತರಣೆ ಕುರಿತು ಚರ್ಚೆ….

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸಾಕಷ್ಟು ವಿಚಾರಗಳ ಕುರಿತು ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಗುರುವಾರ ಸದನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್‌ ವಿತರಣೆ ಕುರಿತು ಚರ್ಚೆ ನಡೆಯಿತು. ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಈ ಹಿಂದೆ 2019-20ನೇ ಸಾಲಿನಲ್ಲಿ ಉಚಿತ ಬೈಸಿಕಲ್ ವಿತರಣೆ ಮಾಡಲಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಲಾಗುತ್ತಿಲ್ಲ. ಆದರೇ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ನಿರಂತರವಾಗಿ ಹಾಜರಾಗಲು ಅನುಕೂಲವಾಗುವಂತೆ ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸಲು ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *