ನವದೆಹಲಿಯ ಸಂಸತ್ ಭವನದಲ್ಲಿ ನಡೆಯುತ್ತಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸನ್ಮಾನಿಸಿದರು. 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಮೊದಲ ಬಾರಿಗೆ ಸಂಸದೀಯ ಮಂಡಳಿ ಸಭೆ ನಡೆಯುತ್ತಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕಾಣಿಸಿಕೊಂಡಿದ್ದು, ಹೀಗೆ. 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡರು. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ್ ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನಕ್ಕೆ ಆಗಮಿಸಿದರು. ಸಂಸದರು ಅವರಿಗೆ ಅದ್ದೂರಿ ಸ್ವಾಗತ ಕೋರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





