ಭಾರತ ತಂಡ ತವರಿನಲ್ಲಿ ನಡೆದ ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿತ್ತು. ಅಲ್ಲದೆ ಸತತ 10 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಫೈನಲ್ ಹಂತವನ್ನು ಪ್ರವೇಶಿಸಿತ್ತು. ಭಾರತ ಮೂರನೇ ಬಾರಿ ವಿಶ್ವಕಪ್ ಗೆಲ್ಲಲಿದೆ ಎಂದು ಕ್ರಿಕೆಟ್ ಪಂಡಿತರೂ ಸಹ ಭವಿಷ್ಯ ನುಡಿದಿದ್ದರು. ನವೆಂಬರ್ 19 ಆ ದಿನ ಭಾರತದ ಪರವಾಗಿರಲಿಲ್ಲ. ಟೂರ್ನಿಯುದ್ದಕ್ಕೂ ಮೈಚಳಿ ಬಿಟ್ಟು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಪ್ಲೇಯರ್ಸ್ ಫೈನಲ್ ಪಂದ್ಯದಲ್ಲಿ ಮಕಾಡೆ ಮಲಗಿದರು. ಆಸೀಸ್ ಬೌಲರ್‌ಗಳ ರಣತಂತ್ರಕ್ಕೆ ಸಿಲುಕಿ ಪದರಾಡಿದರು. ಬೌಂಡರಿ, ಸಿಕ್ಸರ್‌ಗಳನ್ನು ಕಾಣದೆ ಅಭಿಮಾನಿಗಳು ಸಹ ನಿರಾಸೆ ಪಟ್ಟರು.
ಈಗ ದೊಡ್ಡ ವರದಿಯೊಂದು ಹೊರಬಿದ್ದಿದ್ದು, ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಫೈನಲ್ ಪಂದ್ಯ ಆಡಿದ ಪಿಚ್‌ಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ‘ಸರಾಸರಿ’ ರೇಟಿಂಗ್ ನೀಡಿದೆ ಎಂದು ಹೇಳಲಾಗಿದೆ. ಭಾರತದ ಸೋಲಿಗೆ ಪಿಚ್ ಕಾರಣ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಈ ಮೊದಲೇ ಆರೋಪಿಸಿದ್ದರು ಎಂದು ಹಿಂದಿನ ವರದಿಗಳು ಹೇಳಿದ್ದವು.
bigtvnews | Hubli Dharwad News | Kannada News | Karnataka News Hubli News | News In Hubli | Local news





