Breaking News

ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ಮುಂದುವರೆದಿದೆ….

ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ಮುಂದುವರೆದಿದೆ. ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿ ತನ್ವೀರ್ ಹಾಶ್ಮಿ ಐಸಿಸಿ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸುವ ಮೂಲಕ ಯತ್ನಾಳ್ ವಿವಾದದಕ್ಕೆ ನಾಂದಿ ಹಾಡಿದ್ದರು. ಶುಕ್ರವಾರ ಯತ್ನಾಳ್ ಅವರು ಮೌಲ್ವಿ ತನ್ವೀರ್ ಹಾಶ್ಮಿ ಜೊತೆ ವ್ಯವಹಾರದಲ್ಲಿ ಪಾಲು ಹೊಂದಿದ್ದಾರೆ ಎನ್ನುವ ವರದಿ ಬಂದ ನಂತರ, ಸಾಬೀತುಪಡಿಸುವಂತೆ ಯತ್ನಾಳ್ ಸವಾಲು ಹಾಕಿದ್ದರು. ಈಗ ಅದೇ ಮೌಲ್ವಿ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವ ಫೋಟೊಗಳನ್ನು ಸಿದ್ದರಾಮಯ್ಯ ಹಂಚಿಕೊಂಡಿದ್ದು ಯತ್ನಾಳ್‌ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಯತ್ನಾಳ್ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *