ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮಾಜಿ ಸಚಿವ, ಬಿಜೆಪಿ ನಾಯಕ ಬಿ. ಶ್ರೀರಾಮುಲು ಪುತ್ರಿಯ ವಿವಾಹಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಗಮಿಸಿದರು. ನೂತನ ವಧು ವರರನ್ನು ಅವರು ಆಶೀರ್ವದಿಸಿದರು. ಮಾಜಿ ಸಚಿವ, ಬಿಜೆಪಿ ನಾಯಕ ವಿ. ಸೋಮಣ್ಣ ಮಾಜಿ ಸಚಿವ ಬಿ. ಶ್ರೀರಾಮುಲು ಪುತ್ರಿಯ ವಿವಾಹಕ್ಕೆ ಆಗಮಿಸಿ ವಧು ವರರಿಗೆ ಶುಭವನ್ನು ಹಾರೈಸಿದರು. ಬಿ. ಶ್ರೀರಾಮುಲು ಪುತ್ರಿಯ ವಿವಾಹಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸೆಲ್ಫಿ ಕ್ಲಿಕ್ಕಿಸಿಕೊಂಡರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿ. ಶ್ರೀರಾಮುಲು ಪುತ್ರಿಯ ವಿವಾಹದಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಮಾಧಾನದಿಂದ ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news





