Breaking News

ಕಾರು ಮತ್ತು ಸರ್ಕಾರಿ ಬಸ್‌ನ ನಡುವೆ ಮುಖಾಮುಖಿ ಡಿಕ್ಕಿ…

ಕಾರವಾರ: ಕಾರು ಮತ್ತು ಸರ್ಕಾರಿ ಬಸ್‌ನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ. ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್‌ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ. ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಮೃತರ ಪೈಕಿ ನಾಲ್ವರು ಮಂಗಳೂರು ಮೂಲದವರಾಗಿದ್ದು, ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಇನ್ನೋರ್ವ ತಮಿಳುನಾಡು ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್‌ ಬಸ್‌ ಚಾಲಕ ಸೇರಿದಂತೆ ಬಸ್‌ನಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *