Breaking News

ಕೊನೆಗೂ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿ…..

ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ವಿ ಸೋಮಣ್ಣ ಹೀನಾಯವಾಗಿ ಸೋಲು ಅನುಭವಿಸಿದ್ದು, ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿದ್ರು. ಆದರೆ, ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಅಸಮಾಧಾನಗೊಂಡ, ಪಕ್ಷ ತ್ಯಾಗಕ್ಕೆ ವಿ ಸೋಮಣ್ಣ ಮುಂದಾಗಿದ್ದು, ಕೊನೆಗೂ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಸೋಮಣ್ಣ ಅವರಿಗೆ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ,ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಜೊತೆ ವಿ ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಟಾರ್ಗೆಟ್ ತಲುಪುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಅಸಮಾಧಾನಿತ
ಬಿಜೆಪಿ-ಜೆಡಿಎಸ್ ನಾಯಕರಿಗೆ ಗಾಳ ಹಾಕಿದ್ರು. ಅದರಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಲಿಂಗಾಯತ ನಾಯಕರಾಗಿರುವ ವಿ ಸೋಮಣ್ಣ ಅವರಿಗೂ ಗಾಳ ಹಾಕಿದ್ದಾರೆ ಎನ್ನಲಾಗಿತ್ತು. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ವಿ ಸೋಮಣ್ಣ ಪಕ್ಷ ತೊರೆದು ಕಾಂಗ್ರೆಸ್ ಗೆ ಹೋಗುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಆದ ಎಫೆಕ್ಟ್ ಲೋಕಸಭಾ ಚುನಾವಣೆಯಲ್ಲೂ ಆಗುತ್ತದೆ ಎಂದು ರಾಜ್ಯ ನಾಯಕರು ಹೈಕಮಾಂಡ್ ನಾಯಕರಿಗೆ ತಿಳಿಸಿದ್ದಾರೆ.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *