Breaking News

ಕಾಂಗ್ರೆಸ್‌ ಶಾಸಕಿ ಕನೀಝ್‌ ಫಾತಿಮಾ ಅವರಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ…..

ಬೆಂಗಳೂರು: ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಕನೀಝ್‌ ಫಾತಿಮಾ ಅವರಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಚುನಾವಾಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳಲ್ಲಿ ಸತ್ಯಾಂಶಗಳನ್ನು ಮರೆಮಾಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಯಾಗಿದ್ದು, ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚುನಾವಣೆಯಲ್ಲಿ ಕನೀಝ್‌ ಫಾತಿಮಾ ವಿರುದ್ಧ ಜನತಾದಳ (ಸಂಯುಕ್ತ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ ಎ. ಎಸ್. ಶರಣಬಸಪ್ಪ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಾಲಯ ಪ್ರತಿವಾದಿಗಳಾದ ಶಾಸಕಿ, ಕನೀಝ್‌ ಫಾತಿಮಾ, ಚಂದ್ರಕಾಂತ್‌, ನಾಸಿರ್ ಹುಸೇನ್‌, ಮೆಹಬೂಬ್‌ ಷಾ, ಸೈಯದ್‌ ಸಜ್ಜದ್‌ ಅಲಿ, ಅಬ್ದುಲ್‌ ಹಾಜಿ ಮೊಹಮದ್‌, ತಾರಾಭಾಯಿ ಭೋವಿ, ಮೊಹಮದ್‌ ಅಶ್ರಫ್‌, ಅಬ್ದುರ್ ರಹೀಂ, ಅಬ್ದುಲ್‌ ಹಮೀದ್‌ ಬಾಗಬಾನ್‌ ಮತ್ತು ಮುಜಾಹಿದ್‌ ರೌಫ್‌ ಮಜ್ಹರಿ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿತು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *