Breaking News

ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ ಕೊಡಬೇಕು ಎಂದು ಆಗ್ರಹ…

ಬೆಂಗಳೂರು: ಬೆಳಗಾವಿಯ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ಪೊಲೀಸ್ ಇಲಾಖೆಯಿಂದ ನ್ಯಾಯಾಲಯಕ್ಕೆ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಅವರು ಆರೋಪಿಸಿದರು. ದೂರಿನ ಮರುಸೃಷ್ಟಿಯು ರಾಜ್ಯ ಸರಕಾರ ಪ್ರಾಯೋಜಿತ ದೌರ್ಜನ್ಯ ಎಂದು ಟೀಕಿಸಿದರು. ಪೊಲೀಸ್ ಇಲಾಖೆಯನ್ನು ನಿಯಂತ್ರಿಸುವಲ್ಲಿ ವಿಫಲರಾದ ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಬೆಳಗಾವಿಯಲ್ಲಿ ಪೃಥ್ವಿ ಸಿಂಗ್ ಅವರ ಮೇಲೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರನು ಅವರ ಬೆಂಬಲಿಗರ ಜೊತೆ ಹಲ್ಲೆ ಮಾಡಿ ಅವರ ಕೈಯಿಂದ ಮೊಬೈಲ್ ಕಿತ್ತುಕೊಂಡಿದ್ದ ಘಟನೆ ನಡೆದಿದೆ. ಬಳಿಕ ಕೆಎಲ್‍ಇಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾಗ ಪೃಥ್ವಿ ಸಿಂಗ್ ಅವರು 6 ಪುಟಗಳ ದೂರು ದಾಖಲಿಸಿದ್ದರು. ನಿನ್ನೆ ಪೃಥ್ವಿ ಸಿಂಗ್ ಅವರು ಸಂಶಯಗೊಂಡು ಟ್ರೂ ಕಾಪಿಗೆ ಮನವಿ ಸಲ್ಲಿಸಿದ್ದರು ಎಂದು ವಿವರಿಸಿದರು.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *