Breaking News

ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ….

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಈಗ ಕರ್ನಾಟಕದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ‘ಉಗ್ರ’ ಹೇಳಿಕೆ ನೀಡಿದ ನಂತರ ಅಸಮಾಧಾನ ಸ್ಫೋಟಗೊಂಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಇದೇ ವಿಚಾರ ದೊಡ್ಡ ಸದ್ದು ಮಾಡುವಾಗ, ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ ಮಾಡಿದೆ.

ಅಷ್ಟಕ್ಕೂ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ & ಕರ್ನಾಟಕ ಕಾಂಗ್ರೆಸ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿ, ಸಂಚಲನವನ್ನೇ ಸೃಷ್ಟಿಸಿದ್ದರು. ‘ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶ ಪ್ರವಾಸದ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರ ಭೇಟಿ ಆಗಿದ್ದರು.’ ಎಂದು ಯತ್ನಾಳ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಇದೀಗ ಕಾಂಗ್ರೆಸ್ ಉತ್ತರ ನೀಡುತ್ತಿದೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *