Breaking News

ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ….

ಹುಬ್ಬಳ್ಳಿ: ಬಡವರಿಗೆ ವಿತರಣೆ ಮಾಡಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಮಳಿಗೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಅಮರಗೋಳದ ಎಪಿಎಂಸಿ ದಾಸ್ತಾನು ಮಳಿಗೆ ಮೇಲೆ ದಾಳಿ ನಡೆಸಿದ ಸಿಸಿಬಿ ಇನ್ಸ್ಪೆಕ್ಟರ್ ಮಾರುತಿ ಗುಳ್ಳಾರಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, 50ಕೆಜಿಯ 260 ಪ್ಲಾಸ್ಟಿಕ್ ಚೀಲದಲ್ಲಿ ಅಂದಾಜು 130 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸರ್ಕಾರವು ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ ಪೂರೈಸುವ ಪಡಿತರ ಅಕ್ಕಿಯನ್ನು ಆರೋಪಿ ಸಂದೀಪ್ ಜರ್ತಾರ್ಘರ್ ಸಾರ್ವಜನಿಕರಿಂದ 10 ರಿಂದ 15 ರೂಪಾಯಿಗೆ ಖರೀದಿಸುತ್ತಿದ್ದ. ಬಳಿಕ 25 ರಿಂದ 30 ರೂ. ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ದಾಳಿ ವೇಳೆ ವಶಕ್ಕೆ ಪಡೆದ ಒಟ್ಟು ಅಕ್ಕಿಯ ಮೌಲ್ಯ 4.42.000 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಂಧನ ಮಾಡುವಲ್ಲಿ ಯಶಸ್ವಿಯಾದ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಮಾರುತಿ ಗುಳ್ಳಾರಿ, ಎ ಎಸ್ ಐ ಲಂಗೊಟಿ, ಸಿಬ್ಬಂದಿಗಳಾದ ಉಮೇಶ, ಮಾರುತಿ ಭಜಂತ್ರಿ, ರಾಜು ಗುಂಜಳ, ಫಕ್ಕೀರಪ್ಪ ಕುರಿ, ಅನಿಲ ಹುಗ್ಗಿ, ಸಂತೋಷ ಕಡೆಮನಿ ಅವರ ಕಾರ್ಯವೈಖರಿಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share News

About Shaikh BigTv

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *