ಬೆಳಗಾವಿ : ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಿಂದ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ಹೇಳಿಕೆಗೆ ಬದ್ಧ ಎಂದು ಹೇಳಿದ್ದಾರೆ ಇದಕ್ಕೆ ಸರ್ಕಾರದ ನಿಲುವು ಏನು ಎಂದು ಪ್ರಶ್ನೆಗೆ ಅದು ಸದನದ ಮತ್ತು ಸಭಾಧ್ಯಕ್ಷರ ಸ್ವತ್ತು. ಈ ವಿಚಾರವಾಗಿ ಆನಂತರ ಮಾತನಾಡುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





