ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೂರು ಮಾದರಿಯ ಸರಣಿಗಳನ್ನು ಆಡಬೇಕಿದೆ. ಟಿ20 ಸರಣಿಯೊಂದಿಗೆ ಈ ಪ್ರವಾಸ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದೆ, ಆದರೆ ಈ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ಉಳಿದಿವೆ. ಭಾರತ, ಟಿ 20 ನಂತರ, 3 ಪಂದ್ಯಗಳ ಏಕದಿನ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯು ಆಡಲಿದೆ. ಭಾರತದ ಇಬ್ಬರು ದೊಡ್ಡ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಟೆಸ್ಟ್ ಸರಣಿಯಲ್ಲಿ ಮಾತ್ರ ನೋಡ ಬಹುದಾಗಿದೆ. ಏಕದಿನ ವಿಶ್ವಕಪ್ ಬಳಿಕ ಉಭಯ ಆಟಗಾರರು ವಿಶ್ರಾಂತಿ ಪಡೆದಿದ್ದು, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಹಾಗೂ ಟಿ20 ಸರಣಿಯ ಭಾಗವಾಗಿಲ್ಲ.
ವಿರಾಟ್ ಕೊಹ್ಲಿ ಕಳೆದ ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು ಮತ್ತು ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಅವರಿಗೆ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಲಭಿಸಿತ್ತು. ವಿಶ್ವಕಪ್ ಫೈನಲ್ ಪಂದ್ಯದ ನಂತರ ವಿರಾಟ್ ಕೊಹ್ಲಿ ತನ್ನ ಮೊದಲ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಆಡಲಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಒಂದು ಟೆಸ್ಟ್ ಗೆಲ್ಲುವುದು ಭಾರತ ತಂಡಕ್ಕೆ ಪ್ರತಿ ಪ್ರವಾಸದಲ್ಲೂ ಸವಾಲಾಗಿದೆ. ಆದರೆ ವಿರಾಟ್ ಕೊಹ್ಲಿ ಬೌನ್ಸ್ ಮತ್ತು ಸ್ವಿಂಗ್ ಇರುವ ಪಿಚ್ ಗಳಲ್ಲಿ ತಮ್ಮನ್ನೂ ತಾವು ಸಾಬೀತುಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





