Breaking News

ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ: ಸಿದ್ದರಾಮಯ್ಯ.

ಬೆಳಗಾವಿ: ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ. ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು-ಮೂರು ಗುಂಪುಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ ಅವರು, ಇವತ್ತಿನವರೆಗೆಯೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ ಎಂದರು.

ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ. ಪಂಚಾಮಸಾಲಿ ನಾಯಕರ ಮನವಿಗೆ ಸ್ಪಂದಿಸಿಲ್ಲ ಎಂದು ಸ್ವಾಮೀಜಿಗಳು 13 ರಂದು ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ ಮಾಡಲಾಗುತ್ತವೆ ಎಂದು ತಿಳಿಸಲಾಗಿದೆ ಎಂದರು. ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ ಎಂದರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ …

Leave a Reply

Your email address will not be published. Required fields are marked *