ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭವಾಗಲಿದ್ದು, ಇದರಿಂದ ದಿನಪೂರ್ತಿ ರೈಲು ಸೇವೆ ಲಭ್ಯವಾದಂತಾಗಿದೆ. ಇದರಿಂದ ಬೆಂಗಳೂರಿಗೆ ನಿತ್ಯ ಹೋಗಿ ಬರುವ ಸ್ಥಳೀಯರು, ವ್ಯಾಪಾರಸ್ಥರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲುಗಳ ಸೇವೆ ಆರಂಭಿಸಲಾಗಿತ್ತು. ಈ ರೈಲುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಗೆ ಬಂದು ನಿಲ್ಲುತ್ತಿದ್ದವು. ಅಷ್ಟೂ ರೈಲುಗಳನ್ನು ಈಗ ಚಿಕ್ಕಬಳ್ಳಾ ಪುರದವರೆಗೂ ಸಂಚರಿಸಲು ಹಸಿರು ನಿಶಾನೆ ತೋರಲಾಗಿದೆ. ಬೆಂಗಳೂರಿ ನಿಂದ ದೇವನಹಳ್ಳಿವರೆಗೂ ಇದ್ದ ರೈಲು ಸಂಚಾರವನ್ನು ಕಂಟೋನ್ವೆಂಟ್ ನಿಂದ ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸಲಾಗಿದೆ.
ದೇವನಹಳ್ಳಿಯಿಂದ ಬೆಂಗಳೂರುವರೆಗೂ ಇದ್ದ ರೈಲು ಸಂಚಾರ ಚಿಕ್ಕಬಳ್ಳಾಪುರದಿಂದಕಂಟೋನ್ವೆಂಟ್‌ವರೆಗೂ ವಿಸ್ತರಿಸಲಾಗಿದೆ. ಪ್ರಯಾಣಿಕರು ಬೇಕಾಗಿದ್ದಾರೆ: ಸಧ್ಯ ಭಾನುವಾರ ಹೊರತುಪಡಿಸಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸಪುರ ಮತ್ತು ಕೋಲಾ ರದ ನಡುವೆ ಎರಡು ರೈಲುಗಳು ಸಂಚರಿಸುತ್ತಿವೆ. ಬೆಳಗ್ಗೆ ಮತ್ತು ಸಂಜೆ ರೈಲು ಸೇವೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





