Breaking News

ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ ನಾಯಕರ ಮೇಲೆ ಆರೋಪಿಸಿ ಐಟಿ ದಾಳಿ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಕಾಂಗ್ರೆಸ್‌ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆ ದಾಳಿ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿಯ ನಾಯಕರ ಮೇಲೂ ಐಟಿ ದಾಳಿ ನಡೆಸಿದರೂ ಸಹಿತ ಅಪಾರ ಪ್ರಮಾಣದ ಹಣ ಸಿಗುತ್ತದೆ. ಬಿಜೆಪಿ ನಾಯಕರ ಮನೆ ಮೇಲೆ ದಾಳಿ ನಡೆದರೆ ಬೇನಾಮಿ ಹಣ ಸಿಗುತ್ತದೆ ಎನ್ನುವ ಮೂಲಕ ಬಿಜೆಪಿ ನಾಯಕರ ಮನೆಗಳಲ್ಲಿ ಅಪಾರವಾದ ಹಣ ಇದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಗುಡುಗಿದರು.

ಜಾರ್ಖಂಡ್ ನ ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ಮೇಲೆ ಐಟಿ ದಾಳಿ ಆಗಿದ್ದು, ಒಟ್ಟು ಸುಮಾರು 156 ಚೀಲಗಳಲ್ಲಿ ಕಂತೆ ಕಂತೆ ನಗದು ಹಣ ಪತ್ತೆಯಾಗಿವೆ. ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನಗದು ಪತ್ತೆಯಾದ ಕೆಲವೇ ಪ್ರಕರಣಗಳಲ್ಲಿ ಇದು ಒಂದು.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *