ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಆರೋಗ್ಯ ಕೇಂದ್ರಗಳನ್ನು ಪರಿಶೀಲಿಸಿ ಅನಧಿಕೃತವಾದವನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆಯು ಈ ತಿಂಗಳ ಆರಂಭದಲ್ಲಿ ಎಲ್ಲಾ ಜಿಲ್ಲೆಗಳ ಆರೋಗ್ಯ ನಿರೀಕ್ಷಕರಿಗೆ ಆದೇಶಿಸಿದೆ. ಅನಧಿಕೃತ ಕ್ಲಿನಿಕ್ ಬಗ್ಗೆ ಸರಣಿ ದೂರುಗಳ ನಂತರ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯದಲ್ಲಿ ನಕಲಿ ವೈದ್ಯರು ನಡೆಸುತ್ತಿರುವ ಅಕ್ರಮ ವೈದ್ಯಕೀಯ ಕೇಂದ್ರಗಳನ್ನು ಸೀಜ್ ಮಾಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ಇಂತಹ 1,400 ಕ್ಕೂ ಹೆಚ್ಚು ಕ್ಲಿನಿಕ್‌ಗಳನ್ನು ಗುರುತಿಸಿದ್ದು, ಅವುಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಪ್ರಕ್ರಿಯೆಯಲ್ಲಿದೆ.
ಕೋವಿಡ್ 19 ಸಾಂಕ್ರಾಮಿಕದ ನಂತರ ರಾಜ್ಯದಲ್ಲಿ ನಕಲಿ ಕ್ಲಿನಿಕ್‌ಗಳ ದೂರುಗಳು ಹೆಚ್ಚಾಗುತ್ತಿವೆ. ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಇಂತಹ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಿ ಮುಚ್ಚುವಂತೆ ಅಧಿಕಾರಿಗಳಿಗೆ ಆದೇಶ ನೀಡಿದೆ. ರಾಜ್ಯದಲ್ಲಿ ಈಗಾಗಲೇ 1,434 ನಕಲಿ ವೈದ್ಯಾಧಿಕಾರಿಗಳನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





