Breaking News

ಜನರ ಸಂಕಷ್ಟಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತೊಂದರೆಯಾಗದಂತೆ ಕ್ರಮವಹಿಸಲು ರಾಜ್ಯ ಸರ್ಕಾರ ಅನೇಕ ರೀತಿಯ ಪರಿಹಾರಗಳನ್ನು ಕೈಗೊಂಡಿದೆ…..

ಬೆಳಗಾವಿ: ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಯಂತೆ ಮಳೆಯಾಗಿಲ್ಲ. ಮಳೆಯ ಕೊರತೆಯಿಂದಾಗಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಈಗಾಗಲೇ 223 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಖಾತೆಗಳಲ್ಲಿ ಬರ ನಿರ್ವಹಣೆಗೆ ಒಟ್ಟು ರೂ.895 ಕೋಟಿ ಹಣ ಮೀಸಲಿರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.
ಸೋಮವಾರ ಚಳಿಗಾಲದ ವಿಧಾನಸಭೆ ಕಲಾಪದಲ್ಲಿ ಬರ ನಿರ್ವಹಣೆ ಕುರಿತ ಚರ್ಚೆಯ ಮೇಲೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಜೂನ್‍ನಲ್ಲಿ ಶೇ.57, ಆಗಸ್ಟ್‍ನಲ್ಲಿ ಶೇ.73, ಸ್ಪೆಪ್ಟಂಬರ್‍ನಲ್ಲಿ ಶೇ.10 ರಷ್ಟು ಹಾಗೂ ಅಕ್ಟೋಬರ್‍ನಲ್ಲಿ ಶೇ.65 ರಷ್ಟು ಮಳೆಯ ಕೊರತೆಯಾಗಿದೆ. ಪ್ರಸಕ್ತ ವರ್ಷ 82.95 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೇ ಶೇ.74 ರಷ್ಟು ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಮಳೆ ಕೊರತೆಯಿಂದಾಗಿ 46 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿ 48 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ ಜನರ ಸಂಕಷ್ಟಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತೊಂದರೆಯಾಗದಂತೆ ಕ್ರಮವಹಿಸಲು ರಾಜ್ಯ ಸರ್ಕಾರ ಅನೇಕ ರೀತಿಯ ಪರಿಹಾರಗಳನ್ನು ಕೈಗೊಂಡಿದೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *