Breaking News

ಬಸ್ ನಿಲ್ದಾಣದ ಒಂದು ಸುತ್ತು ಬಂದ ಸಂಚಾರಿ ಪೊಲೀಸರು ಎಲ್ಲಾ ವಾಹನಗಳನ್ನು ತೆರವುಗೊಳಿಸಿ ಬಸ್‌ಗಳು ಸರಾಗವಾಗಿ ಚಲಿಸಲು ಅನುಕೂಲವಾಗುವಂತೆ ವ್ಯವಸ್ಥೆ..

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಒಳ ಭಾಗದಲ್ಲಿ ವಾಹನಗಳ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬೈಕ್‌ಗಳನ್ನು ಹಿಡಿದು ದಂಡ ವಿಧಿಸಿದರು, ಬಸ್ ನಿಲ್ದಾಣ ಪ್ರವೇಶ ಮಾಡದಂತೆ ಎಚ್ಚರಿಕೆಯನ್ನು ಸಹ ನೀಡಿದರು. ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಒಳಭಾಗದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಬಸ್ ನಿಲ್ದಾಣದ ಒಳಗೆ ಇದ್ದ ಬೈಕ್ ಸೇರಿದಂತೆ ವಿವಿಧ ವಾಹನಗಳನ್ನು ತೆರವುಗೊಳಿಸಿದರು.

ಬಸ್ ನಿಲ್ದಾಣದ ಒಂದು ಸುತ್ತು ಬಂದ ಸಂಚಾರಿ ಪೊಲೀಸರು ಎಲ್ಲಾ ವಾಹನಗಳನ್ನು ತೆರವುಗೊಳಿಸಿ ಬಸ್‌ಗಳು ಸರಾಗವಾಗಿ ಚಲಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಿದರು.
ಖಾಸಗಿ ಬಸ್ ನಿಲ್ದಾಣದ ಒಳಭಾಗದ ಅಂಗಡಿಗಳ ಮಾಲೀಕರು, ಕೆಲಸಗಾರರು ಬೈಕ್ ಸೇರಿದಂತೆ ವಾಹನಗಳನ್ನು ತಂದು ಬಸ್ ನಿಲ್ದಾಣದ ಒಳಗೆ ನಿಲ್ಲಿಸುತ್ತಾರೆ. ಆದ್ದರಿಂದ ಅವರಿಗೂ ಸಹ ಎಚ್ಚರಿಕೆ ನೀಡಲಾಯಿತು.

Share News

About bigtvnews22

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *