Breaking News

ಯಡಿಯೂರಪ್ಪ ಹಾಗೂ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಪದೇ ಪದೇ ಯತ್ನಾಳ್‌ ವಾಗ್ದಾಳಿ….

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ಸ್ಥಾನ ಕೈ ತಪ್ಪಿದ ಮೇಲೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹಾಗೂ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಪದೇ ಪದೇ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ಸ್ವಪಕ್ಷದ ನಾಯಕರ ವಿರುದ್ಧವೇ ಬಸವನಗೌಡ ಪಾಟೀಲ್‌ ಯತ್ನಾಳ್‌ ವಾಗ್ದಾಳಿಯನ್ನ ಮುಂದುವರೆಸಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಸಾರ್ವಜನಿಕವಾಗಿ ಟೀಕಿಸಿದ್ದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮಠಾಧೀಶರ ಮುಂದೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಸವನಗೌಡ ಪಾಟೀಲ್‌ ಯತ್ನಾಳ್, ಯಡಿಯೂರಪ್ಪ ಅವರನ್ನು ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಬಳಿಕ ರಾಜ್ಯದ ಮುಖ್ಯಮಂತ್ರಿ ಮಾಡಿಸಿದ್ದೇ ನಾನು, ಅರುಣ್ ಜೇಟ್ಲಿ ಅವರು ತನ್ನನ್ನು ಬಿಜೆಪಿ ಸೇರುವಂತೆ ಆಹ್ವಾನಿಸಿದಾಗ ಅವರ ಮುಂದೆ ಈ ಷರತ್ತು ಇಟ್ಟೇ ಪಕ್ಷ ಸೇರಿದ್ದೆ ಎಂದು ಯತ್ನಾಳ್‌ ಸತ್ಯ ಬಿಚ್ಚಿಟ್ಟು ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *