ಬೆಳಗಾವಿ: ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ರೂ.1 ಲಕ್ಷ ರೂ ಗಳ ಬಹುಮಾನ ನೀಡುವುದರ ಜೊತೆಗೆ ಮಾಹಿತಿ ನೀಡುವವರ ಗೋಪ್ಯತೆಯನ್ನು ಕಾಪಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಕುರಿತು ಮಂಗಳವಾರ ವಿಧಾನಪರಿಷತ್‌ನಲ್ಲಿ ನಡೆದ ಗಮನ ಸೆಳೆಯುವ ಸೂಚನೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ತಡೆಯುವ ಕುರಿತಂತೆ ಪ್ರಸ್ತುತ ಜಾರಿಯಲ್ಲಿರುವ ಪಿಸಿಪಿಎನ್‌ಡಿಟಿ ಕಾಯಿದೆಯನ್ವಯ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳುವುದರ ಜೊತೆಗೆ ಪ್ರತೀ 3 ತಿಂಗಳಿಗೊಮ್ಮೆ ಅಧಿಕಾರಿಗಳ ಮೂಲಕ ಗೋಪ್ಯ ಕಾರ್ಯಚರಣೆ ನಡೆಸುವ ಮೂಲಕ ಅಕ್ರಮ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಾನೂನು ಬಾಹಿರವಾಗಿ ನಡೆಯುವ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಕುರಿತಂತೆ ಸಾರ್ವಜನಿಕರು ಇಲಾಖೆಯ ಉಚಿತ ಸಹಾಯವಾಣಿ 104 ಗೆ ಮಾಹಿತಿ ನೀಡಬಹುದಾಗಿದ್ದು, ಮುಂದಿನ ದಿನಗಳಲ್ಲಿ ಪತ್ಯೇಕ ಸಹಾಯವಾಣಿ ಆರಂಭಿಸಲಾಗುವುದು ಹಾಗೂ ನಿಖರ ಮಾಹಿತಿ ನೀಡುವ ಸಾರ್ವಜನಿಕರಿಗೆ 1 ಲಕ್ಷ ರೂ ಗಳ ಬಹುಮಾನ ನೀಡಲಾಗುವುದು.
bigtvnews | Hubli Dharwad News | Kannada News | Karnataka News Hubli News | News In Hubli | Local news





