Breaking News

ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯ ಆಡಳಿತ ಆರಂಭ….

ಭೋಪಾಲ್: ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯ ಆಡಳಿತ ಆರಂಭವಾಗಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮರಳಿ ಅಧಿಕಾರವನ್ನು ಪಡೆದಿತ್ತು. ಬುಧವಾರ ಭೋಪಾಲ್‌ನ ಲಾಲ್ ಪರೇಡ್‌ ಗ್ರೌಂಡ್‌ನಲ್ಲಿ ನಡೆದ ಸಮಾರಂಭದಲ್ಲಿ ಮೋಹನ್ ಯಾದವ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. 58 ವರ್ಷದ ಮೋಹನ್ ಯಾದವ್ ಈ ಹಿಂದೆ ಶಿವರಾಜ್ ಸಿಂಗ್ ಚೌವ್ಹಾಣ್ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು. ಉಜ್ಜೈನಿ ದಕ್ಷಿಣ ಕ್ಷೇತ್ರದಿಂದ ಅವರು 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

Share News

About BigTv News

Check Also

ಮಹಿಳಾ ವೈದ್ಯೆಯೊಬ್ಬಳ ಮೃತದೇಹ ಭೋಪಾಲ್ ಮನೆ ಕೋಣೆಯಲ್ಲಿ ಪತ್ತೆ.ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು.!

ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ವೈದ್ಯೆಯೊಬ್ಬಳ ಮೃ*ತದೇಹ ಭೋಪಾಲ್ ನಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು ಆಕೆಯ ತೋಳಿನ ಮೇಲೆ …

Leave a Reply

Your email address will not be published. Required fields are marked *