Breaking News

ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ…

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದು, ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದು ವಿಪಕ್ಷಗಳು ಸದನದ ಹೊರಗೆ ಹಾಗೂ ಸದನದ ಒಳಗೆ ಸರ್ಕಾರದ ಕಿಡಿಕಾರಿವೆ. ಮಂಗಳವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದು, ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ.ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್‌ 13 ರಂದು ಮಧ್ಯಾನ್ಹ ರೈತರ ಹೋರಾಟ ನಡೆಯಲಿದೆ. 25 ಸಾವಿರ ರೈತರು ಭಾಗವಹಿಸುತ್ತಾರೆ ಎಂದು ಹೇಳಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *