ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ಶ್ವೇತಾ ಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪತಿ ದರ್ಶನ್ ವಶಕ್ಕೆ ಪಡೆದು ಗೋಣಿಬೀಡು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಜಿಲ್ಲೆಯ ಕಳಸ ಪಟ್ಟಣದಲ್ಲಿ ಶ್ವೇತಾ ಅಂತ್ಯ ಸಂಸ್ಕಾರ ನಡೆದಿದೆ. 31 ವರ್ಷದ ಶ್ವೇತಾ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಮನೆಯಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದರು. ಈ ಸಾವಿನ ಕುರಿತು ಹಲವು ಅನುಮಾನ ವ್ಯಕ್ತವಾಗಿದೆ. ಆಕೆಯ ಪತಿ ದರ್ಶನ್ ಕೊಲೆ ಮಾಡಿದ್ದಾರೆ ಎಂದು ಶ್ವೇತಾ ಕುಟುಂಬದವರು ಆರೋಪ ಮಾಡುತ್ತಿದ್ದಾರೆ.
ಮೃತ ಶ್ವೇತಾ ಹಾಗೂ ದರ್ಶನ್ ಇಬ್ಬರೂ ಲ್ಯಾಬ್ ಟೆಕ್ನಿಷಿಯನ್. ಶಿವಮೊಗ್ಗ, ಬೆಂಗಳೂರಿನಲ್ಲಿ ಲ್ಯಾಬ್‌ಗಳಿವೆ. ದರ್ಶನ್ ಮತ್ತು ಶ್ವೇತಾ ಪರಸ್ಪರ ಪ್ರೀತಿಸುತ್ತಿದ್ದರು. ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಒಂದು ಮಗುವೂ ಇದೆ. ದರ್ಶನ್ ಲ್ಯಾಬ್‌ನಲ್ಲಿ ಕೆಲಸ ಮಾಡುವ ಅಶ್ವಿನಿಯನ್ನು ಪ್ರೀತಿಸುತ್ತಿದ್ದರು. ಶ್ವೇತಾ ದರ್ಶನ್ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದರು. ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news





