ಬೆಳಗಾವಿ: ಸಿಲಿಕಾನ್ ಸಿಟಿ ಬೆಂಗಳೂರು ದಿನಿದಿಂದ ದಿನಕ್ಕೆ ಬೃಹದ್ಧಾಕಾರವಾಗಿ ಬೆಳೆಯುತ್ತಲಿದ್ದು, ಅಷ್ಟೇ ಪ್ರಮಾಣದಲ್ಲಿ ವಾಹನಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದರಿಂದ ನಗರಲ್ಲಿ ವಾಯುಮಾಲಿನ್ಯ ಹೆಚ್ಚಳ ಆಗುವುದಲ್ಲದೇ ಇವುಗಳ ಒತ್ತಡದಿಂದ ಬಹುತೇಕ ಕಡೆ ರಸ್ತೆಗಳು ಚರಂಡಿಯಾಗಿ ಮಾರ್ಪಟ್ಟಿವೆ. ಇನ್ನು ಸರ್ಕಾರ ರಸ್ತೆಗಳಿಗೆ ವೈಟ್ ಟಾಪಿಂಗ್ ಹಾಕುವ ಮೂಲಕ ಬೆಂಗಳೂರು ಅಭಿವೃದ್ಧಿಗೆ ಮುಂದಾಗಿದೆ. ಹಾಗಾದರೆ ಇದಕ್ಕೆ ಮೀಸಲಿಟ್ಟ ಅನುದಾನ ಎಷ್ಟು…?
ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಹೆಚ್. ಎಸ್ ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳು ಇವೆ. ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ. ನಗರದಲ್ಲಿ ನಿತ್ಯ ಸರಾಸರಿ 1,300 ದ್ವಿಚಕ್ರ ವಾಹನಗಳು ಹಾಗೂ 490 ಕಾರುಗಳು ನೊಂದಣಿ ಆಗುತ್ತಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





