ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರಿಸಲು ಪೋಷಕರು ತಯಾರಿ ನಡೆಸುತ್ತಿದ್ದಾರೆ. ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಎಂಬ ಕುರಿತು ಪೋಷಕರಿಗೆ ಮಾಹಿತಿ ನೀಡಲು ಪ್ರಕಟಣೆ ಹೊರಡಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಆನ್‌ಲೈನ್ ಮೂಲಕ 31/12/2023ರ ತನಕ ಅರ್ಜಿ ಸಲ್ಲಿಕೆ ಮಾಡಬಹುದು. ಪ್ರವೇಶ ಪತರ ಡೌನ್‌ಲೋಡ್ 1/2/2024ರಂದು ಮಾಡಿಕೊಳ್ಳಬೇಕು. ಪ್ರವೇಶ ಪರೀಕ್ಷೆ 18/2/2024ರಂದು ನಡೆಯಲಿದೆ.ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕರ್ನಾಟಕ ಸರ್ಕಾರದ ಅಂಗ ಸಂಸ್ಥೆ) ಸುತ್ತೋಲೆಯೊಂದನ್ನು ಹೊರಡಿಸಿದೆ. ಈ ಸುತ್ತೋಲೆ 2024-25 ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪ್ರಕ್ರಿಯೆ ಕುರಿತು ಎಂಬ ವಿಷಯ ಒಳಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





