Breaking News

ಕಾಂಗ್ರೆಸ್‌ ಸಭೆಯಲ್ಲಿ ಬಿಜೆಪಿ ಇಬ್ಬರು ಶಾಸಕರು ಪ್ರತ್ಯಕ್ಷ…..

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್‌ ಸದ್ಯ ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಗಾಳ ಹಾಕಿದ್ದು, ಕಾಂಗ್ರೆಸ್‌ ಸಭೆಯಲ್ಲಿ ಬಿಜೆಪಿ ಇಬ್ಬರು ಶಾಸಕರು ಪ್ರತ್ಯಕ್ಷರಾಗಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್‌, ವಿಧಾನ ಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ ಅವರು ಅವರು ಭಾಗವಹಿಸುವ ಮೂಲಕ ಕೈ ಹಿಡಿಯುತ್ತಾರೆ ಎಂಬುದು ಖಚಿತವಾಗಿದೆ ಎನ್ನಲಾಗಿದೆ. ಈಗಾಗಲೇ ಹೆಚ್‌ ವಿಶ್ವನಾಥ್‌ ನನ್ನ ತವರು ಮನೆ ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್‌ ಹೋಗುವುದರಲ್ಲಿ ತಪ್ಪಿಲ್ಲ ಎಂದು ಕಾಂಗ್ರೆಸ್‌ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದಾರೆ.

ಇತ್ತ ಈಗಾಗಲೇ ಬಿಜೆಪಿ ಸಭೆಗಳಿಂದ ದೂರ ಉಳಿದಿರುವ ಅವರು, ಶಾಸಕ ಎಸ್‌ ಟಿ ಸೋಮಶೇಖರ್‌ ಹಾಗೂ ಶಿವರಾಂ ಹೆಬ್ಬಾರ್‌ ಮತ್ತೆ ಕಾಂಗ್ರೆಸ್‌ ಸೇರುವ ಕುರಿತು ಬಹುತೇಕ ಖಚಿತವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೇಳುವ ನೆಪದಲ್ಲಿ ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಈ ಇಬ್ಬರೂ ಶಾಸಕರು, ಬುಧವಾರ ರಾತ್ರಿ ಪಕ್ಷದ ಶಾಸಕರ ಜೊತೆ ಭೋಜನಕೂಟದಲ್ಲಿ ಭಾಗವಹಿಸಿದರು ಎಂದು ಬಿಜೆಪಿ ಗೆ ಕೈ ಕೊಟ್ಟ ಕಾಂಗ್ರೆಸ್‌ ಸೇರ್ಪಡೆಯಾಗುವುದು ಖಚಿತ ಎನ್ನಲಾಗಿದೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *