ಬೆಳಗಾವಿ: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಹಲವು ನಾಯಕರು ಅಸಮಾಧಾನ ಹೊರಹಾಕಿದ್ದರು. ಸಚಿಕ್ಕಾಗಿ ಈಗಾಗಲೇ ಹಲವು ನಾಯಕರು ಬೇಡಿಕೆ ಇಟ್ಟಿದ್ದು, ಸದನದಲ್ಲಿಯೇ ಕಾಂಗ್ರೆಸ್ ಶಾಸಕ ಬಹಿರಂಗವಾಗಿ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನನ್ನನ್ನೂ ಮಂತ್ರಿ ಮಾಡಿ, ಮಂತ್ರಿಯಾದರೆ ಜನರಿಗೆ ಎಲ್ಲ ಅನುಕೂಲ ಮಾಡಿಕೊಡಬಹುದು ಎಂದು ಸದನದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನಮ್ಮ ಮುಖ್ಯಮಂತ್ರಿಗಳಿಗೆ ದಯವಿಟ್ಟು ಕೇಳ್ತೀನಿ ನನಗೂ ಮಿನಿಸ್ಟರ್ ಮಾಡಿ. ನಮ್ಮ ಭಾಗದ ರೈತರಿಗೆ ಅನ್ಯಾಯ ಆಗುತ್ತಿದೆ, ಮಂತ್ರಿ ಆದರೆ ಮಾತ್ರ ಕೆಲಸ ಮಾಡಬಹುದು ಎಂದು ಹೇಳಿದರು. ಈ ವೇಳೆ ಸ್ಪೀಕರ್ ಯು ಟಿ ಖಾದರ್ ಅವರು, ಹಾಗಾದರೆ ನಾಲ್ಕು ಸಲ ಗೆದ್ದು ಬನ್ನಿ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





