ಬೆಂಗಳೂರು: ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಎಂದು ಎಎಪಿ ಪ್ರಶ್ನಿಸಿದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್ ಶಾ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಸತ್ತಿನ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೊಸ ಸಂಸತ್ತು ಉದ್ಘಾಟನೆಗೊಂಡ ನಂತರ ನಡೆದಿರುವ ಎರಡನೇ ಭದ್ರತಾ ಲೋಪ ಇದಾಗಿದೆ. 22 ವರ್ಷಗಳ ಹಿಂದಿನ ಭಯೋತ್ಪಾದಕರ ದಾಳಿ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ, ಈ ಘಟನೆ ಹಿಂದೆ ಬೇರೆ ಹುನ್ನಾರಗಳಿರಬಹುದು.
bigtvnews | Hubli Dharwad News | Kannada News | Karnataka News Hubli News | News In Hubli | Local news





