Breaking News

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ವಿ. ಸದಾನಂದಗೌಡ.

ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಪೆÇಲೀಸರು ಇಲ್ಲಿ ಪ್ರತಿಭಟನೆ ಮಾಡಬಾರದು ಎಂದು ಹೇಳಿದ್ದಾರೆ. ಇಷ್ಟು ಕೆಟ್ಟ ಆಡಳಿತವನ್ನು ನನ್ನ ಜೀವನದಲ್ಲೇ ನೋಡಿಲ್ಲ. ಆಡಳಿತ ವ್ಯವಸ್ಥೆ ಪೂರ್ತಿ ಹದಗೆಟ್ಟಿದೆ. ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗಿದೆ ಎಂದು ಟೀಕಿಸಿದರು. ಡಿ ಕೆ ಶಿವಕುಮಾರ್ ಗೆ ರಾಜ್ಯದ ಆಡಳಿತವೇ ಬೇಡ ಎಂಬಂತಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಇಳಿಸಿ ಹೊಸ ಸಿಎಂ ಮಾಡಲು ಪ್ರಯತ್ನದಲ್ಲಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ವಿಶ್ವಾಸಕ್ಕೆ ತಗೊಂಡು ಸರ್ಕಾರ ಕೆಲಸ ಮಾಡ್ತಿಲ್ಲ. ಪರಮೇಶ್ವರ್, ಯಾವಾಗ ಎಚ್ಚೆತ್ತುಕೊಳ್ತಾರೋ ಅಲ್ಲಿ ವರೆಗೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

Share News

About BigTv News

Check Also

ಪೊಲೀಸ್ ಇಲಾಖೆ ಯಡವಟ್ಟಿನಿಂದ ರೌಡಿಗಳಿಗೆ ರಿಲೀಫ್..?

ರೌಡಿಗಳಿಗೆ ರಿಲೀಫ್ ಕೊಟ್ಟವರು ಯಾರು..? ತಪ್ಪು ಮಾಹಿತಿ ನೀಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಆಗ್ರಹ..! ಪೊಲೀಸ್ ಇಲಾಖೆಯ ಯಡವಟ್ಟಿನಿಂದ …

Leave a Reply

Your email address will not be published. Required fields are marked *