ದಾವಣಗೆರೆ: ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಮತಾಂಧ ಹಾಗೂ ಹಿಂದು ದೇವಾಲಯಗಳನ್ನ ದ್ವಂಸಗೊಳಿಸಿರುವ ಟಿಪ್ಪು ಸುಲ್ತಾನ್ ನ ಹೆಸರಿಡುವುದು ಯಾಕೆ, ಅದನ್ನು ಬಿಟ್ಟು ಮೈಸೂರು ಮಹಾರಾಜರ ಹೆಸರನ್ನ ನಾಮಕರಣ ಮಾಡಿ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಮಾಧ್ಯಮಗಳ ಜೊತೆಗೆ ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿ, ಟಿಪ್ಪು ಸುಲ್ತಾನ್ ನ ಹೆಸರು ನಾಮಕರಣ ಮಾಡಿದರೆ ಜನರು ರೊಚ್ಚಿಗೇಳುತ್ತಾರೆ, ಕ್ರಾಂತಿಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನ ನೀಡಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಬದಲು ಮೈಸೂರು ಮಹಾರಾಜರ ಹೆಸರಿಡುವಂತೆ ಒತ್ತಾಯ ಮಾಡಿದ್ದಾರೆ. ಸರ್ಕಾರ ನಾಲ್ಕು ವಿಮಾನ ನಿಲ್ದಾಣಗಳ ನಾಮಕರಣಕ್ಕೆ ಮುಂದಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ, ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಹೆಸರು ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ನಾವು ಇದನ್ನ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





