ಧಾರವಾಡ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಡಿಸೆಂಬರ್ 30ರೊಳಗೆ ಧಾರವಾಡ ಕ್ಷೇತ್ರ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಧಾರವಾಡ ಲೋಕಸಭಾ ಚುನಾವಣೆಯ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ವೀಕ್ಷಕ ಸಭೆ ನಡೆಸುತ್ತಿದ್ದು, ಸಭೆ ಈಗಾಗಲೇ ಆಗಬೇಕಾಗಿತ್ತು. ಆದರೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ನಾನು ಬ್ಯುಸಿಯಾಗಿದ್ದೆ. ಇದರ ಜೊತೆಗೆ ನಾನು ಉಡುಪಿಯ ಉಸ್ತುವಾರಿಯೂ ಹೌದು ಹೀಗಾಗಿ ತಡವಾಗಿದೆ ಎಂದು ಹೇಳಿದರು.
ಬೆಳಗಾವಿಗೆ ಹೋಗಲು ವಾರಕ್ಕೆ ಎರಡು ದಿನ ಸಿಗುತ್ತಿದೆ. ಹೀಗಾಗಿ ಧಾರವಾಡಕ್ಕೆ ಬರುವುದಕ್ಕೆ ಸ್ವಲ್ಪ ತಡ ಆಗಿದೆ ಯಾವುದೇ ಕಾರಣಕ್ಕೂ ಡಿಸೆಂಬರ್ 30ರೊಳಗೆ ಧಾರವಾಡ ಲೋಕಸಭಾ ಕ್ಷೇತ್ರದ ಕಾಮಗ್ರೆಸ್ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ. ಈ ಸಂಬಂಧ ನನಗೆ ಸೂಚನೆ ಕೊಟ್ಟಿದ್ದಾರೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





