ಶನಿವಾರ, ಡಿಸೆಂಬರ್ 16ರಂದು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಭಾರತ ಮಹಿಳಾ ತಂಡ 347 ರನ್‌ಗಳ ಬೃಹತ್ ಅಂತರದಿಂದ ಗೆದ್ದು ಬೀಗಿತು. ಆಲ್‌ರೌಂಡರ್ ದೀಪ್ತಿ ಶರ್ಮಾ ಅವರ ಪಂದ್ಯ-ವಿಜೇತ ಪ್ರದರ್ಶನದ ಸಹಾಯದಿಂದ ಭಾರತ ಮಹಿಳಾ ತಂಡವು ಇಂಗ್ಲೆಂಡ್ ವನಿತೆಯರನ್ನು 347 ರನ್‌ಗಳಿಂದ ಸೋಲಿಸಲು ನೆರವಾಯಿತು ಮತ್ತು ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ ಇದುವರೆಗಿನ ಅತಿದೊಡ್ಡ ಗೆಲುವು ದಾಖಲಿಸಿತು.ಭಾರತ ತಂಡವು 3ನೇ ದಿನದ ಬೆಳಗಿನ ಅವಧಿಯಲ್ಲಿ ಇಂಗ್ಲೆಂಡ್ ತಂಡವನ್ನು 131 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ತವರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಮಹಿಳೆಯರ ವಿರುದ್ಧ ಮೊದಲ ದಿಗ್ವಿಜಯ ಸಾಧಿಸಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





