ಐಶ್ವರ್ಯಾ ರೈ – ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಡಿಸೆಂಬರ್ 15 ರಂದು ಮುಂಬೈನಲ್ಲಿ ನಡೆದ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ ವಾರ್ಷಿಕ ದಿನದ ಕಾರ್ಯಕ್ರಮದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಬಚ್ಚನ್ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.ನಟಿ ಐಶ್ವರ್ಯಾ ರೈ ಬಚ್ಚನ್ ಅತ್ತೆ ಮನೆಯನ್ನು ತೊರೆದು ತಾಯಿಯ ಜೊತೆಯಲ್ಲಿ ವಾಸ ಮಾಡುತ್ತಿದ್ದಾರೆ ಎಂದು ನಿನ್ನೇಯಷ್ಟೇ ವರದಿಯಾಗಿತ್ತು. ಅದರ ಬೆನ್ನಲ್ಲೇ ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್, ಅಮಿತಾಬ್ ಬಚ್ಚನ್, ಅಗಸ್ತ್ಯ ನಂದಾ ಸೇರಿ ಹಲವರು ಒಂದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ರೈ – ಅಭಿಷೇಕ್ ಬಚ್ಚನ್ ಅವರ ಹಲವು ಫೋಟೋಗಳು ಮತ್ತು ವಿಡಿಯೋಗಳು ಪಾಪರಾಜಿಗಳ ಸೋಷಿಯಲ್ ಮೀಡಿಯಾ ಹ್ಯಾಂಡಲ್‌ಗಳಲ್ಲಿ ವೈರಲ್ ಆಗುತ್ತಿವೆ.
ಕರಾವಳಿ ಬೆಡಗಿ ಐಶ್ವರ್ಯಾ ರೈ- ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯಕ್ಕೆ ಬರೋಬ್ಬರಿ ಹದಿನಾರು ವರ್ಷಗಳಾಗಿವೆ. ಇಬ್ಬರಿಗೆ ಆರಾಧ್ಯ ಎಂಬ ಮುದ್ದಾದ ಮಗಳಿದ್ದಾಳೆ. ಇಬ್ಬರು ಕೂಡ ಮಗಳಿಗಾಗಿಯೇ ಒಂದಾಗಿದ್ದಾರೆ ಎಂಬ ಮಾತುಗಳು ಇವೆ. ಕಳೆದ ಬಾರಿ ಕೂಡ ಇಂತಹದ್ದೇ ಸುದ್ದಿ ಹಬ್ಬಿದಾಗ ‘ದಿ ಆರ್ಚೀಸ್’ ಸಿನಿಮಾದ ಪ್ರೀಮಿಯರ್ ನೈಟ್‌ನಲ್ಲಿ ಇಡೀ ಬಚ್ಚನ್ ಕುಟುಂಬದೊಂದಿಗೆ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಜಂಟಿಯಾಗಿ ಕಾಣಿಸಿಕೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





