Breaking News

ಕೇಂದ್ರ ಸರ್ಕಾರದ ಜೊತೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವುದು ಒಬ್ಬ ಜವಾಬ್ದರಿಯುತ ಮುಖ್ಯಮಂತ್ರಿಗೆ ಇರಬೇಕಾದ ಪ್ರಮುಖ ಲಕ್ಷಣ,….

ಬೆಂಗಳೂರು: ಪ್ರಧಾನಿಮಂತ್ರಿ ನರೇಂದ್ರ ಮೋದಿಯನ್ನು ಭೇಟಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಅವಕಾಶ ಸಿಕ್ಕಿದೆ. ಮಂಗಳವಾರ ದೆಹಲಿಗೆ ಸಿದ್ದರಾಮಯ್ಯ ತೆರಳಲಿದ್ದಾರೆ. ಈ ಮಧ್ಯೆ ವಿಧಾನಮಂಡಲ ಅಧಿವೇಶನದಲ್ಲಿ ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಅವರು ಮಾತನಾಡಿದ್ದನ್ನು ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಸ್ತಾಪಿಸಿ ಕೆಲವು ಇತಿ ಮಿತಿಗಳ ಕುರಿತು ತಿಳಿಸಿದ್ದಾರೆ.

ಇತ್ತೀಚಿನ ಚಳಿಗಾಲ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸಿಎಂ ಸಿದ್ದರಾಮಯ್ಯನವರು ರೋಷಾವೇಶ ಗಮನಿಸಿದರೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ ಕಾಂಗ್ರೆಸ್ ಹೈಕಮಾಂಡ್ ಅನ್ನು ಮೆಚ್ಚಿಸುವುದೇ ಅವರ ಉದ್ದೇಶವೆಂದು ಅನ್ನಿಸುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಈ ವಿಚಾರ ಪ್ರಸ್ತಾಪಿಸಿದ ಆರ್‌. ಅಶೋಕ್ ಸೋಮವಾರ ಸರಣಿ ಟ್ವೀಟ್ ಮಾಡಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜೊತೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವುದು ಒಬ್ಬ ಜವಾಬ್ದರಿಯುತ ಮುಖ್ಯಮಂತ್ರಿಗೆ ಇರಬೇಕಾದ ಪ್ರಮುಖ ಲಕ್ಷಣ ಮಾತ್ರವಲ್ಲ ಅದು ಕರ್ತವ್ಯ ಕೂಡ ಹೌದು.

Share News

About BigTv News

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *