ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ನಡೆಸಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ಪದಾಧಿಕಾರಿಗಳ ನೇಮಕಕ್ಕೆ ಕಾಂಗ್ರೆಸ್ ಮುಂದಾಗಿದೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕುರಿತು ಮಾಧ್ಯಮಗಳ ಜೊತೆಗೆ ಸಚಿವ ಎಂ ಬಿ ಪಾಟೀಲ್ ಮಾತನಾಡಿ, ನಾನು ಸಚಿವನಾಗಿದ್ದೇನೆ ಪ್ರಚಾರ ಸಮಿತಿ ಅಧ್ಯಕ್ಷನೂ ಆಗಿದ್ದೇನೆ. ನನ್ನ ಕೇಳಿದರೆ ನಾನೇ ಹೇಳುತ್ತೇನೆ ಮತ್ತೊಬ್ಬರಿಗೆ ಅವಕಾಶ ಕೊಡಿ ಅಂತ, ಎಲ್ಲಾ ಕಡೆ ನಾನೇ ಇರಬೇಕು ಎಂಬ ದುರಾಸೆ ನನಗಿಲ್ಲ. ಪ್ರಚಾರ ಸಮಿತಿ ಅಧ್ಯಕ್ಷರನ್ನು ಬೇರೆ ಯಾರಿಗಾದರೂ ಮಾಡುವುದಾದರೆ ಮಾಡಿಕೊಳ್ಳಿ ಎಂದು ಹೇಳುತ್ತೇನೆ ಎಂದರು. ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ, ಕಾರ್ಯಾಧ್ಯಕ್ಷರನ್ನ ಬದಲಾವಣೆ ಮಾಡಿದ್ರೆ ತಪ್ಪೇನಿಲ್ಲ. ನಾನು ಸಚಿವನಾಗಿದ್ದೇನೆ,ಬೇಕಾದ್ರೆ ಪ್ರಚಾರ ಸಮಿತಿ ಯಾರಿಗಾದರೂ ಮಾಡಿ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





